1 ತಿಮೋಥೇ 3

ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

1 Timothy 3:14 (UKJV) These things write I unto you, hoping to come unto you shortly:

12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.

13ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

14ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.

16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

Kannada Bible (Old Version), Bible Society of India.