1ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
4ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.