8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
9ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.
10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
11ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.