1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.