19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.