2 ಉತ್ತರಕಾಲವೃತ್ತಾಂತ 13

ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.

2 Chronicles 13:6 (UKJV) Yet Jeroboam the son of Nebat, the servant of Solomon the son of David, has risen up, and has rebelled against his lord.

4ಆಗ ಅಬೀಯನು ಎಫ್ರಾಯಾಮ್‌ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.

5ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?

6ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.

7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.

8ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.

Kannada Bible (Old Version), Bible Society of India.