14ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
15ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
16ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
18ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.