2 ಉತ್ತರಕಾಲವೃತ್ತಾಂತ 15

ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.

2 Chronicles 15:3 (UKJV) Now for a long season Israel has been without the true God, and without a teaching priest, and without law.

1ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--

2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;

3ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.

4ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.

5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.

Kannada Bible (Old Version), Bible Society of India.