8ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
11ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ.
12ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.