6ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
7ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
8ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.