11ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
12ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
13ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
14ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
15ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.