2 ಉತ್ತರಕಾಲವೃತ್ತಾಂತ 28

ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.

2 Chronicles 28:25 (UKJV) And in every several city of Judah he made high places to burn incense unto other gods, and provoked to anger the LORD God of his fathers.

23ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.

24ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

25ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.

26ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.

27ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್‌ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.

Kannada Bible (Old Version), Bible Society of India.