1ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
2ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.