8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
9ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
12ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ