11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
12ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
13ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ
14ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.
15ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.