2 ಉತ್ತರಕಾಲವೃತ್ತಾಂತ 29

ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.

2 Chronicles 29:20 (UKJV) Then Hezekiah the king rose early, and gathered the rulers of the city, and went up to the house of the LORD.

18ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.

19ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.

20ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.

21ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.

22ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.

Kannada Bible (Old Version), Bible Society of India.