2 ಉತ್ತರಕಾಲವೃತ್ತಾಂತ 29

ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ

2 Chronicles 29:26 (UKJV) And the Levites stood with the instruments of David, and the priests with the trumpets.

24ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,

25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.

26ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ

27ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.

28ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.

Kannada Bible (Old Version), Bible Society of India.