29ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು.
30ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
31ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
32ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
33ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.