31ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
32ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
33ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.
34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
35ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.