2 ಉತ್ತರಕಾಲವೃತ್ತಾಂತ 29

ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.

2 Chronicles 29:9 (UKJV) For, lo, our fathers have fallen by the sword, and our sons and our daughters and our wives are in captivity for this.

7ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.

8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.

9ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.

10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.

11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.

Kannada Bible (Old Version), Bible Society of India.