10ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
11ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.
12ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
13ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.