12ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
13ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
15ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
16ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.