2 ಉತ್ತರಕಾಲವೃತ್ತಾಂತ 3

ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.

2 Chronicles 3:15 (UKJV) Also he made before the house two pillars of thirty and five cubits high, and the capital that was on the top of each of them was five cubits.

13ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.

14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.

15ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.

16ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.

17ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.

Kannada Bible (Old Version), Bible Society of India.