15ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
16ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.
17ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.