4ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
5ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
6ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.
7ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.
8ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.