7ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.
8ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
9ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.
10ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
11ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.