4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
5ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
6ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
7ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.
8ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.