1ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
2ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ
3ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.