11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
13ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
14ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
15ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.