17ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
18ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
19ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
20ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.