22ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
23ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
24ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.