2 ಉತ್ತರಕಾಲವೃತ್ತಾಂತ 32

ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.

2 Chronicles 32:28 (UKJV) Storehouses also for the increase of corn, and wine, and oil; and stalls for all manner of beasts, and cotes for flocks.

26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.

27ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.

28ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.

29ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.

30ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.

Kannada Bible (Old Version), Bible Society of India.