3ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
4ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
6ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
7ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.