7ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
9ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
10ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?