1ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
2ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,
3ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
4ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು