2 ಉತ್ತರಕಾಲವೃತ್ತಾಂತ 35

ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.

2 Chronicles 35:3 (UKJV) And said unto the Levites that taught all Israel, which were holy unto the LORD, Put the holy ark in the house which Solomon the son of David king of Israel did build; it shall not be a burden upon your shoulders: serve now the LORD your God, and his people Israel,

1ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.

2ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,

3ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.

4ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು

5ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.

Kannada Bible (Old Version), Bible Society of India.