3ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
4ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು
5ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.
6ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
7ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ