9ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
12ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.