12ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
14ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.