2 ಉತ್ತರಕಾಲವೃತ್ತಾಂತ 36

ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.

2 Chronicles 36:19 (UKJV) And they burnt the house of God, and brake down the wall of Jerusalem, and burnt all the palaces thereof with fire, and destroyed all the goodly vessels thereof.

17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.

18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.

19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.

20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.

21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.

Kannada Bible (Old Version), Bible Society of India.