18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
22ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --