2 ಉತ್ತರಕಾಲವೃತ್ತಾಂತ 36

ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.

2 Chronicles 36:3 (UKJV) And the king of Egypt put him down at Jerusalem, and condemned the land in an hundred talents of silver and a talent of gold.

1ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.

2ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.

3ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.

4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.

5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.

Kannada Bible (Old Version), Bible Society of India.