3ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
7ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.