2 ಉತ್ತರಕಾಲವೃತ್ತಾಂತ 36

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.

2 Chronicles 36:6 (UKJV) Against him came up Nebuchadnezzar king of Babylon, and bound him in fetters, to carry him to Babylon.

4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.

5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.

6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.

7ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.

8ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.

Kannada Bible (Old Version), Bible Society of India.