13ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
14ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.
15ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ
16ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
17ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.