2 ಉತ್ತರಕಾಲವೃತ್ತಾಂತ 6

ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.

2 Chronicles 6:3 (UKJV) And the king turned his face, and blessed the whole congregation of Israel: and all the congregation of Israel stood.

1ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ.

2ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.

3ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.

4ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.

5ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.

Kannada Bible (Old Version), Bible Society of India.