36ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
37ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
38ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
39ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
40ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.