19ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
20ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
21ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
22ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
23ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.