23ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
24ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
25ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
26ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.