2 ಉತ್ತರಕಾಲವೃತ್ತಾಂತ 9

ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.

2 Chronicles 9:7 (UKJV) Happy are your men, and happy are these your servants, which stand continually before you, and hear your wisdom.

5ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.

6ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.

7ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.

8ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.

9ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.

Kannada Bible (Old Version), Bible Society of India.